Featured, ಅಂಕಣ, ರಾಜ್ಯ

ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

5 ರೂ. ಹೆಚ್ಚಿಸಲು ಒಕ್ಕೂಟಗಳ ಮನವಿ

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಬಜೆಟ್ ನಂತರ ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದು, ಸಂಗೋಪನೆಯ ವೆಚ್ಚ ಹೆಚ್ಚಳದಿಂದಾಗಿ ದರ ಏರಿಕೆ ಅನಿವಾರ್ಯ ಎಂದು ವಾದಿಸುತ್ತಿವೆ. ಪಶುಸಂಗೋಪನಾ ಸಚಿವರು ಮತ್ತು ಕೆಎಂಎಫ್ ಅಧಿಕಾರಿಗಳ ನಡುವೆ ಈಗಾಗಲೇ ಚರ್ಚೆಯಾಗಿದೆ.

ದರ ಏರಿಕೆಗಳಿಂದ ಈಗಾಗಲೆ ಕರ್ನಾಟಕದ ಜನರು ಕಂಗೆಟ್ಟಿದ್ದಾರೆ. ಇದೀಗ, ಬಜೆಟ್ ಬಳಿಕ ರಾಜ್ಯ ಸರ್ಕಾರ ಹಾಲಿನ ದರವನ್ನೂ ಕೂಡ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಲೆ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.

ಹಾಲಿನ ದರ ಏರಿಸುವಂತೆ ರೈತರಿಂದ ಮನವಿ

ಕಳೆದ ವರ್ಷ ಡಿಸೆಂಬರ್ನಲ್ಲಿ ರೈತರು ಹಾಗೂ ಹಾಲು‌ ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು

m

Related Posts