Featured, ಅಂಕಣ, ಸ್ಥಳೀಯ

ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಗೆ ಮನವಿ

ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಗ್ ಎಂಬಲ್ಲಿ ಸಾರ್ವಜನಿಕರು ನಡೆದಾಡುವ ಪ್ರದೇಶದಲ್ಲಿ ದಟ್ಟವಾಗಿ ಹುಲ್ಲುಗಳು ಬೆಳೆದಿದ್ದು, ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದಾಗಿ ಇಲ್ಲಿ ಗಬ್ಬು ವಾಸನೆ ಬರುತ್ತಿದ್ದು ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಹಾಗೂ ಇಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಡೆದಾಡಲು ತುಂಬಾ ತೊಂದರೆಯಾಗುತ್ತಿದ್ದು, ಆರೋಗ್ಯದ ಮೇಲೂ ದುಷ್ಪರಿಣಾಮಗಳು ಬೀರುತ್ತಿದೆ. ಇದನ್ನು ಮನಗಂಡ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿ ನಿಯೋಗವು ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಯವರನ್ನು ಭೇಟಿಯಾಗಿ ಶೀಘ್ರವೇ ಸಂಬಂಧಪಟ್ಟವರ ಮೂಲಕ ಇದಕ್ಕೆ ಪರಿಹಾರವನ್ನು ಕೈಗೊಂಡು ಸಾರ್ವಜನಿಕರಿಗೆ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ WIM ಮಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಅಝ್ವೀನ ಅಕ್ರಮ್ ಕಾಟಿಪಳ್ಳ, ಸಮಿತಿ ಸದಸ್ಯೆ ಮಿನಾಝ್ ಮುಲ್ಕಿ ಹಾಗೂ WIM ಗುತ್ತಕಾಡು ಬ್ರಾಂಚ್ ಸಮಿತಿ ಅಧ್ಯಕ್ಷೆ ನೂರ್ ಜಹಾನ್ ಗುತ್ತಕಾಡು ರವರು ಉಪಸ್ಥಿತರಿದ್ದರು.

m

Related Posts