ಆತೂರು: ಕುಂಡಾಜೆ
2024-25 ನೇ ಸಾಲಿನಲ್ಲಿ ಸಮಸ್ತ ನಡೆಸಿದ 5,7 ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಕುಂಡಾಜೆ ಇಝತ್ತುಲ್ ಇಸ್ಲಾಂ ಮದ್ರಸದಿಂದ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿರುತ್ತದೆ. 5 ಮತ್ತು 7ನೇ ತರಗತಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ. 5 ನೇ ತರಗತಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಫಲಿತಾಂಶದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಜಮಾಅತ್ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವಿದ್ಯಾರ್ಥಿಗಳನ್ನು ಮತ್ತು ಅಧ್ಯಾಪಕರನ್ನು ಅಭಿನಂದಿಸಿರುತ್ತಾರೆ.





m

