Featured, ಇತರೆ, ಸ್ಥಳೀಯ

ಸಭಾಧ್ಯಕ್ಷರ ಪೀಠಕ್ಕೆ ಅಗೌರವ : ವಿಧಾನಸಭೆಯಿಂದ 18 ​​ಶಾಸಕರನ್ನು ಅಮಾನತು ಗೊಳಿಸಿದ ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು : ವಿಧಾನ ಸಭೆ ಕಲಾಪ ನಡೆಯುವ ವೇಳೆ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ​​ಶಾಸಕರನ್ನು ಸ್ಪೀಕರ್ ಯು.ಟಿ. ಖಾದರ್ ರವರು ಆರು ತಿಂಗಳ ಕಾಲ ವಿಧಾನಸಭೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮಧ್ಯಾಹ್ನದ ಭೋಜನ ವಿರಾಮದ ನಂತ್ರ ಕಲಾಪ ಆರಂಭಗೊಳ್ಳುತ್ತಿದ್ದಂತೆ ಮುಸ್ಲೀಂ ಮೀಸಲಾತಿ ಮಸೂದೆ ಸೇರಿದಂತೆವಿವಿಧ ಮಸೂದೆ ವಿರೋಧಿಸಿ ಬಿಜೆಪಿಯ ಶಾಸಕರು ಪ್ರತಿಭಟನೆ, ಗದ್ದಲ ಕೋಲಾಹಲವನ್ನು ಉಂಟು ಮಾಡಿದರು. ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘ಹನಿಟ್ರ್ಯಾಪ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದವು. ಸ್ಪೀಕರ್ ಮನವಿಗೆ ಕ್ಯಾರೇ ಎನ್ನದ ಶಾಸಕರಿಗೆ ಅಮಾನತು ಶಿಕ್ಷೆ ಎದುರಾಯಿತು ಈ ಕೆಳಗಿನ 18 ಶಾಸಕರನ್ನು ಅಮಾನತು ಮಾಡಿ ಸ್ಪೀಕರ್ ಆದೇಶ ಹೊರಡಿಸಿದರು

ಅಮಾನತು ಗೊಂಡ ಶಾಸಕರು

ದೊಡ್ಡನಗೌಡ ಪಾಟೀಲ, ಸಿ.ಕೆ. ರಾಮಮೂರ್ತಿ, ಅಶ್ವಥ್ ನಾರಾಯಣ್, ಎಸ್.ಆರ್. ವಿಶ್ವನಾಥ್, ಬೈರತಿ ಬಸವರಾಜ್, ಎಂ.ಆರ್.ಪಾಟೀಲ್, ಚನ್ನಬಸಪ್ಪ, ಬಿ.ಸುರೇಶ್ ಗೌಡ, ಉಮಾನಾಥ ಕೋಟ್ಯಾನ್, ಶರಣು ಸಲಗರ, ಶೈಲೇಂದ್ರ ಬೆಲ್ದಾಳೆ, ಯಶಪಾಲ್ ಸುವರ್ಣ, ಹರೀಶ್ ಬಿ.ಪಿ., ಡಾ.ಭರತ್ ಶೆಟ್ಟಿ, ಮುನಿರತ್ನ, ಬಸವರಾಜ ಮಟ್ಟಿಮೋಡ್, ಧೀರಜ್ ಚಂದ್ರುರಾಜು,

m

Related Posts