BNS ಆಕ್ಟ್ 281 IMV ಆಕ್ಟ್ ನ 184 ಸೆಕ್ಷನ್ ಅಡಿಯಲ್ಲಿ ಸುಳ್ಯ ಪೋಲಿಸ್ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಬಾಗದ ಬಾಗಿಲು ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ನಿಂತುಕೊಂಡಿದ್ದರು. ಇಬ್ಬರು ಹಿಂಬದಿ ಸೀಟಿನ ಎಡ ಹಾಗೂ ಬಲ ಬದಿಯ ಬಾಗಿಲಿನ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎರಡೂ ಬಾಗಿಲಿನ ಚಾಲಕನ ಬದಿಯಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ♦

ಸುಳ್ಯ : ನಿನ್ನೆ ಸಂಜೆಯ ಸಮಯದಲ್ಲಿ ಮಾಣಿ-ಮೈಸೂರು ಹೆದ್ದಾರಿಯ ಸಂಪಾಜೆ ಭಾಗದಿಂದ ಸುಳ್ಯ ರಸ್ತೆಯಲ್ಲಿ ಅತೀ ವೇಗದಲ್ಲಿ ಚಲಿಸುವ ಕಾರಿನ ಮೇಲೆ ಕುಳಿತು. ಆರು ಮಂದಿ ಯುವಕರು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಓವರ್‌ಟೇಕ್ ಮಾಡುತ್ತ ತನ್ನ ಕಾರನ್ನು ಚಾಲನೆ ಮಾಡುತ್ತ ಹುಚ್ಚಾಟ,ಪುಂಡಾಟ,ಮೆರೆಯುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಅಗಿ ಸಾರ್ವಜನಿಕ ವಲಯದಲ್ಲಿ ಪುಂಡಾಟ ಮೆರೆದ ಯುವಕರ ಮೇಲೆ ಆಕ್ರೋಶ ವ್ಯಕ್ತವಾಗಿತ್ತು. ಮಾತ್ರವಲ್ಲದೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ ಕೇಳಿ ಬಂದಿತ್ತು ಇದೀಗ ಸುಳ್ಯ ಪೊಲೀಸರು ಕಾನೂನು ಕ್ರಮ ಕೈಗೊಂಡು ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.





m

