ನವದೆಹಲಿ: ದುಬೈ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ರಶೀದ್ ಎರಡು ದಿನಗಳ ಭೇಟಿಗಾಗಿ ನಿನ್ನೆ ದೆಹಲಿಗೆ ಆಗಮಿಸಿದರು. ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ದುಬೈ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ರಶೀದ್ ನಿನ್ನೆ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ.
ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್ ಗೋಪಿ ದುಬೈ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ರಶೀದ್ ರನ್ನು ಬರಮಾಡಿಕೊಂಡರು.
ಪ್ರಧಾನಿ ಮೋದಿ ನಿನ್ನೆ ರಾಜಕುಮಾರ ಮೊಹಮ್ಮದ್ ಬಿನ್ ರಶೀದ್ ಅವರಿಗೆ ಭೋಜನ ಕೂಟವನ್ನು ಆಯೋಜಿಸಿದ್ದರು. ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ಸಂಬಂಧವನ್ನು ಹಲವಾರು ಕ್ಷೇತ್ರಗಳಲ್ಲಿ ಬಲಪಡಿಸಲು ಇಬ್ಬರೂ ನಾಯಕರು ಮಾತುಕತೆ ನಡೆಸಿದರು.
ದೆಹಲಿ ಭೇಟಿಯನ್ನು ಮುಗಿಸಿ ಇಂದು ಮುಂಬೈಗೆ ತೆರಳುತ್ತಿರುವ ಪ್ರಿನ್ಸ್ ಮೊಹಮ್ಮದ್ ಬಿನ್ ರಶೀದ್, ಮುಂಬೈ ಉದ್ಯಮಿಗಳನ್ನು ಭೇಟಿ ಮಾಡಿ ಮೂಲಸೌಕರ್ಯ, ಇಂಧನ, ಫಿನ್ಟೆಕ್ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ವ್ಯಾಪಾರ ಮತ್ತು ಹೂಡಿಕೆ ಕುರಿತು ಮಾತುಕತೆ ನಡೆಸಲಿದ್ದಾರೆ.
ದುಬೈ ರಾಜಕುಮಾರನ ಭೇಟಿಯ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ದುಬೈ ರಾಜಕುಮಾರ ಮೊಹಮ್ಮದ್ ಬಿನ್ ರಶೀದ್ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ” ಎಂದು ಹೇಳಿದರು.
“ಭಾರತ-ಯುಎಇ ಸಂಬಂಧಗಳಲ್ಲಿ ಅವರ ಭೇಟಿ ಬಹಳ ಮಹತ್ವದ್ದಾಗಿದೆ” ಎಂದಿದ್ದಾರೆ.





m
