ಭಯೋತ್ಪಾದಕ ದಾಳಿ | ಸಿಎಂ ಸಿದ್ದರಾಮಯ್ಯ ತುರ್ತುಸಭೆ; ಕಾಶ್ಮೀರಕ್ಕೆ ತೆರಳಿದ ರಾಜ್ಯದ ಅಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ 5 ಪ್ರವಾಸಿಗರು ಬಲಿ, ಹಲವರಿಗೆ ಗಾಯ;
ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಕ್ರೂರ ದಾಳಿಯಲ್ಲಿ ಸುಮಾರು 25 ಜನರು ಸಾವನ್ನಪ್ಪಿದ್ದಾರೆ.
ಅನೇಕ ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಹಿಂದಿರುವವರು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರವಾಸಿ ತಾಣ ಪಹಲ್ಗಾಮ್‌ನಲ್ಲಿ ನಡೆದ ದಾಳಿಯು ಅನೇಕರನ್ನು ಆಘಾತಗೊಳಿಸಿದೆ. “ಮೃತರ ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಸರ್ಕಾರವೇ ಇದನ್ನು ದೃಢಪಡಿಸಲಿದೆ. ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತಿ ದೊಡ್ಡ ದಾಳಿ ಇದಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.





m


ಪ್ರಧಾನಿ ಮೋದಿ ಈ ದಾಳಿಯನ್ನು ಖಂಡಿಸಿದ್ದಾರೆ. ತೆರೆಮರೆಯಲ್ಲಿರುವವರು ಕಾನೂನಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದೂ ಅವರು ಹೇಳಿದರು. ಈ ಸಂಬಂಧ ಪ್ರಧಾನಿ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ನಿಟ್ಟಿನಲ್ಲಿ ಎಲ್ಲಾ ಮೂಲಭೂತ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ಪ್ರಧಾನಿ ಮೋದಿ ಅಮಿತ್ ಶಾ ಅವರಿಗೆ ಆದೇಶಿಸಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಮಹತ್ವದ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಅಮಿತ್ ಶಾ ಶ್ರೀನಗರಕ್ಕೆ ತೆರಳಿದ್ದಾರೆ.
ಪ್ರವಾಸಿಗರಿಗೆ ಸಹಾಯ ಮಾಡಲು ಅನಂತನಾಗ್ ಪೊಲೀಸ್ ಇಲಾಖೆಯಿಂದ ತುರ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಿದ್ದು, ಈ ಕೇಂದ್ರವನ್ನು ಸಂಪರ್ಕಿಸಲು, ನೀವು 9596777669, 01932225870 ಮತ್ತು ವಾಟ್ಸಾಪ್ ಸಂಖ್ಯೆ 9419051940 ಅನ್ನು ಸಂಪರ್ಕಿಸಬಹುದು .