ರಾಜ್ಯದಲ್ಲಿ ಸುಮಾರು 207 ಜನೌಷಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳ ಆವರಣದಲ್ಲಿಯೇ ಸ್ಥಾಪನೆಯಾಗಿದೆ. ಜನಸಾಮಾನ್ಯರಿಗೆ ಇದರಿಂದ 80% ವರೆಗೆ ಕಡಿಮೆ ದರದಲ್ಲಿ ಜೆನೆರಿಕ್ ಔಷಧಿಗಳು ದೊರೆಯುತ್ತಿದ್ದವು : ಭಾಗೀರಥಿ ಮುರುಳ್ಯ

ಸುಳ್ಯ : ರಾಜ್ಯದಾದ್ಯಂತ ಸರಕಾರಿ ಆಸ್ಪತ್ರೆಗಳಿಂದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ
ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅವರು ಜನೌಷಧಿ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪ್ರಜಾಪ್ರಭುತ್ವ ಯೋಜನೆಯಾಗಿದ್ದು, ಲಕ್ಷಾಂತರ ಬಡ ಜನರಿಗೆ ಕಡಿಮೆ ಬೆಲೆಯ, ಉತ್ತಮ ಗುಣಮಟ್ಟದ ಜನರಿಕ್ ಔಷಧಗಳನ್ನು ಒದಗಿಸುತ್ತಿತ್ತು. ಎಷ್ಟೋ ಜನ ಔಷಧಕ್ಕೆ ಹಣ ಇಲ್ಲ ಎಂದು ಮಾತ್ರೆಗಳನ್ನು ತೆಗೆದುಕೊಳ್ಳದೆ ಇರುವುದನ್ನು ನಾವು ಗಮನಿಸಿದ್ದೆವೆ. ಈ ಯೋಜನೆಯಿಂದ ಅತ್ಯಂತ ಕಡಿಮೆ ದರದಲ್ಲಿ ಬಡ ರೋಗಿಗಳು ಔಷಧವನ್ನು ಪಡೆಯುವ ಸೌಲಭ್ಯದ ಕಾರಣ ತಮ್ಮ ಜೀವನವನ್ನು ಉಳಿಸಿದ್ದಾರೆ. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇಂದು ಈ ಯೋಜನೆಗೆ ಆರ್ಥಿಕವಾಗಿಯೂ ಸಾಮಾಜಿಕವಾಗಿಯೂ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆ, ಸಮಂಜಸ ವಲ್ಲ. ಜನೌಷಧಿ ಕೇಂದ್ರಗಳು ಬಡವರಿಗೆ ಅವಶ್ಯಕವಿಲ್ಲ, ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಔಷಧಿ ಕೊಡಬೇಕು ಎಂಬ ಸಚಿವರ ಹೇಳಿಕೆ ದುರಾದೃಷ್ಟಕರ ಈ ಸರ್ಕಾರ ಬಡವರ ಪರ ವಿರೋಧಿ ನಿಲುವನ್ನು ಸಾಬೀತು ಪಡಿಸಿದೆ! ಎಂದು ಆರೋಪಿಸಿದರು.




m

