Featured, ಅಂಕಣ, ಇತರೆ, ಸ್ಥಳೀಯ

“ಕೊಡಗು ಜಿಲ್ಲಾ ಯುವ ಕಾಂಗ್ರೆಸ್ : ಸರ್ಕಾರದ ಎರಡು ವರ್ಷದ ಸಾಧನೆ;

ಮಡಿಕೇರಿ ಆಸ್ಪತ್ರೆಯಲ್ಲಿ ರೋಗಿಗಳ ಬೇಟಿ ಮತ್ತು ಹಣ್ಣುಹಂಪಲು ವಿತರಣೆ;”

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಾಯಿತು.

ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಷೇಕ್ ರಿಜ್ವಾನ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಮಂಜು ಚೆಟ್ಟಿ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡಾ ಸೋಮಣ್ಣ ನೇತೃತ್ವದ ಶಿಷ್ಟಮಂಡಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿ, ಹೆರಿಗೆಯಾದ ಮಹಿಳೆಯರಿಗೆ ಶುಭಾಶಯಗಳನ್ನು ತಿಳಿಸಿ, ಹಣ್ಣುಹಂಪಲು ವಿತರಿಸಿದರು. ಇದರೊಂದಿಗೆ ಕಾರ್ಯಕ್ರಮದ ಮೂಲಕ ಪಂಚ ಗ್ಯಾರಂಟಿ ಕಾಂಗ್ರೆಸ್ ಸರ್ಕಾರದ ವಿಜಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ ಆನಂದ ಕುಮಾರ್, ಬೆಂಗಳೂರು ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಲಕೃಷ್ಣ, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಮೈಸಿ ಕತನ್ನಿರ, ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಹುಲ್ ಮಾರ್ಷಲ್, ಮಡಿಕೇರಿ ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಅಬ್ದುಲ್ ಅಕೀಮ್, ವಿರಾಜಪೇಟೆ ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷ ಅನೂಪ್ ಕುಮಾರ್, ಸೋಮವಾರಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಚಂಗಪ್ಪ, ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್, ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ವಿರಾಜಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಬೀರ್ ಮತ್ತು ಶಕೀಲ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರು ಅರ್ಜುನ್ ಮತ್ತು ಅನ್ಫಾಲ್ ಮುತ್ತಣ್ಣ, ಹಾಗೂ ಹಂಸು ಸೋಮಣ್ಣ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

m

Related Posts