ಕಾಲೇಜಿಗೆ ತೆರಳಿದ್ದ ಚಿನ್ಮಯಿ ಶೆಟ್ಟಿ ತನ್ನ ಸ್ನೇಹಿತರ ಜೊತೆ ಆರ್ಸಿಬಿ ಗೆಲುವಿನ ಸಂಭ್ರಮ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಕಾಲು ತುಳಿತಕ್ಕೆ ಸಿಲುಕಿ ಈಕೆ ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಲಾಗಿದೆ.
ಚಿನ್ಮಯಿ ಶೆಟ್ಟಿ(19) ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು.
ಈಕೆ ತಂದೆ ಕರುಣಾಕರ ಶೆಟ್ಟಿ, ತಾಯಿ ಪೂಜಾ. ಓರ್ವ ಸಹೋದರ ಬ್ಯಾಂಕ್ ಉದ್ಯೋಗದಲ್ಲಿದ್ದಾರೆ. ತಂದೆ ಕರುಣಾಕರ ಶೆಟ್ಟಿ ಬೆಂಗಳೂರಿನ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿದ್ದಾರೆ. ಪ್ರಸ್ತುತ ಈ ಕುಟುಂಬ ಬೆಂಗಳೂರಿನ ನಾರಾಯಣ ನಗರದಲ್ಲಿ ನೆಲೆಸಿದೆ.
ಈಕೆ ಬೆಂಗಳೂರು ಜ್ಯೋತಿ ಕೇಂದ್ರೀಯ ವಿದ್ಯಾಲಯದ ಪ್ರಥಮ ವರ್ಷದ ಬಿಇ ವಿದ್ಯಾರ್ಥಿನಿ. ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದು ಓದಿನಲ್ಲೂ ಮುಂದೆ ಇದ್ದ ಈಕೆ ಕ್ರೀಡೆಯಲ್ಲೂ ಸಾಧಕಿ. ಯಕ್ಷ ತರಂಗ ಯಕ್ಷಗಾನ ತರಬೇತಿ ಸಂಸ್ಥೆಯ ವಿದ್ಯಾರ್ಥಿ.





m
