ಕನಕಮಜಲು: 26-07-2025 ಶನಿವಾರದಂದು ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನಕಮಜಲು ಇಲ್ಲಿ ಪ್ರಥಮ ತರಗತಿಯ ದ್ವಿಭಾಷಾ (ಆಂಗ್ಲ ಮಾಧ್ಯಮ) ತರಗತಿಯ ಉದ್ಘಾಟನೆ ಹಾಗೂ ಪೋಷಕರ ವಿಶೇಷ ಸಭೆ ವಿಜೃಂಭಣೆಯಿಂದ ನಡೆಯಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ಕೆ.ಎಂ. ಅಬ್ದುಲ್ ಹಮೀದ್ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ ಶ್ರೀಧರ ಕುತ್ಯಾಳ ದೀಪ ಪ್ರಜ್ವಲನ ನೆರವೇರಿಸಿದರು. ತರಗತಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಸದಸ್ಯ ಇಬ್ರಾಹಿಂ ಖಾಸಿಂ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷ ಹರ್ಷಿತ್ ಉಗ್ಗಮೂಲೆ, ಎಸ್ಡಿಎಂಸಿ ಉಪಾಧ್ಯಕ್ಷೆ ಹರಿಣಿ ಅಕ್ಕಿಮಲೆ ಮುಂತಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಗೀತಾಕುಮಾರಿ ಸ್ವಾಗತ ಭಾಷಣ ನೀಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಶೇಷಮ್ಮ ಪ್ರಾಸ್ತಾವಿಕ ಭಾಷಣ ನಡೆಸಿದರು. ನಂತರ, ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ವಂದನಾರ್ಪಣೆ ಸಲ್ಲಿಸಿದರು.

ಅನಂತರ ನಡೆದ ಪೋಷಕರ ಸಭೆಯಲ್ಲಿ ಶಿಕ್ಷಕಿಯರಾದ ಶ್ರೀಮತಿ ಪ್ರೇಮ ಮತ್ತು ಶ್ರೀಮತಿ ಯಶೋಧ ರವರು ಪೋಷಕರಿಗಾಗಿ ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಶೇಷಮ್ಮ ಅವರು FLN (Foundational Literacy and Numeracy) ಮತ್ತು ಸಚೇತನ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.

ಪೋಷಕರು ಉತ್ತಮ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಗೆ ಖುಷಿಯ ಸೂಚನೆ ನೀಡಿದರು. ಕಾರ್ಯಕ್ರಮವನ್ನು ಶಿಕ್ಷಕ ನಟೇಶ್ ಸುಸೂತ್ರವಾಗಿ ನಿರೂಪಿಸಿದರು.





m
