Featured, ಅಂಕಣ, ಸ್ಥಳೀಯ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಕುಟ್ರುಪ್ಪಾಡಿ ಮಹಾಶಕ್ತಿ ಕೇಂದ್ರದ ಸವಣೂರು ಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ರಕ್ಷಾ ಬಂಧನವನ್ನು ಭಾವಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭಾಗವಹಿಸಿ, “ಸಹೋದರತೆಯಿಂದ ಬಾಳೋಣ, ಸಹೋದರತೆಯ ಸಂಕೇತವಾದ ರಕ್ಷಾ ಬಂಧನವನ್ನು ಅರ್ಥಪೂರ್ಣವಾಗಿ ಆಚರಿಸೋಣ” ಎಂದು ತಮ್ಮ ನುಡಿಗಳನ್ನು ಹಂಚಿಕೊಂಡರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿಕೆ, ಕಾರ್ಯದರ್ಶಿ ಆಶಾ ರೈ, ಕಲಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ, ಪಂಚಾಯತ್ ಸದಸ್ಯರು, ಸಿಎ ಬ್ಯಾಂಕ್ ಸಿಬ್ಬಂದಿ ವರ್ಗ ಹಾಗೂ ಮಹಿಳಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

m

Related Posts