ವೈದ್ಯಕೀಯ & ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಇಬ್ಬರಿಗೆ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮ
ಪೈಚಾರ್:ಸಾಮಾಜಿಕ, ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಳ್ಯ ತಾಲೂಕಿನ ಪ್ರತಿಷ್ಠಿತ ಸಂಸ್ಥೆ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ ಆಗಸ್ಟ್ 15ರಂದು ಪೈಚಾರ್ನಲ್ಲಿ ನಡೆಯಲಿದೆ.
ಬೆಳಿಗ್ಗೆ 8:30ಕ್ಕೆ ಉದ್ಘಾಟನಾ ಕಾರ್ಯಕ್ರಮ ಹಾಗೂ ಧ್ವಜಾರೋಹಣ ನಡೆಯಲಿದ್ದು, ಮಧ್ಯಾಹ್ನ 2:00ಕ್ಕೆ ಸಭಾ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ವೈದ್ಯಕೀಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಇಬ್ಬರು ಗಣ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.

ವೈದ್ಯಕೀಯ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಸುಳ್ಯದ ಹಿರಿಯ ವೈದ್ಯ ಡಾ. ಶಂಕರ್ ಭಟ್ ಮತ್ತು ಪಿಲಿಕ್ಕೋಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ಸುಂದರ್ ಮಾಸ್ಟರ್ (ಹಲವಾರು ಮಕ್ಕಳಿಗೆ ಶಿಕ್ಷಣ ಧಾರೆಯೆರೆದವರು) ಇವರಿಗೆ ಅದ್ದೂರಿ ಸನ್ಮಾನ ಸಮಾರಂಭ ಜರುಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.






m
