ಇತರೆ, ಸ್ಥಳೀಯ

ಹವಾಮಾನ ಇಲಾಖೆ ಮುನ್ಸೂಚನೆ : ಮುಂದಿನ ಐದು ದಿನ ಭಾರಿ ಮಳೆ! ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು, ಆ.17: ರಾಜ್ಯದ ಹಲವೆಡೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆ.17 ಮತ್ತು 18 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಅತ್ಯಂತ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೋಡಗು ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿಯೂ ಭಾರೀ ಮಳೆ ನಿರೀಕ್ಷೆ ಇದೆ. ನದಿಪಾತ್ರ ಪ್ರದೇಶಗಳಲ್ಲಿ ನೆರೆಹೊರೆ ಸಮಸ್ಯೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ ಆಡಳಿತಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

m

Related Posts