ಪುತ್ತೂರು: ತಾಲೂಕಿನಲ್ಲಿ ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ತಹಸೀಲ್ದಾರರು ಇಂದು (ಆ.28) ಶಾಲಾ ರಜೆ ಘೋಷಿಸಿದ್ದಾರೆ.
ಬಿ.ಇ.ಓ. ರವರೊಂದಿಗೆ ಚರ್ಚಿಸಿದ ಬಳಿಕ ತಹಸೀಲ್ದಾರರವರು ತೆಗೆದುಕೊಂಡ ನಿರ್ಧಾರದ ಪ್ರಕಾರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಇಂದು ರಜೆ ನೀಡಲಾಗಿದೆ ಎಂದು ಪುತ್ತೂರು ತಹಸೀಲ್ದಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ





m

