ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯ ಗುಂಡಿಯಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳೂರು: ಕೂಳೂರು ಬಳಿ ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿ ಮಹಿಳೆ ಮೃತ್ಯು ಆಗಿರುವುದಕ್ಕೆ ನ್ಯಾಶನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಕಾರಣ ಎಂದು ಹೇಳಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಕ್ಷ ನಿನ್ನೆ ಪಕ್ಷದ ಮುಖಂಡರ ನಿಯೋಗ ಮಂಗಳೂರಿನ ಕಾವೂರು ಪೊಲೀಸ್ ಠಾಣೆ ತೆರಳಿ ಹೆದ್ದಾರಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿ ಒತ್ತಾಯಿಸಿದ್ದಾರೆ ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್,ಕಬೀರ್ ಕಾಟಿಪಳ್ಳ,ಸೀಮಾ ಮಡಿವಾಳ,ಜೇಮ್ಸ್ ಡಿಸಾ,ವಾಸುದೇವ, ಉಪಸ್ಥಿತರಿದ್ದರು.




m

