Featured, ಇತರೆ, ಸ್ಥಳೀಯ

ಕಾದಂಬರಿಕಾರ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಭೈರಪ್ಪ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ತಾನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.

ಹೃದಯಾಘಾತದಿಂದಾಗಿ ಮಧ್ಯಾಹ್ನ 2.38ಕ್ಕೆ ನಿಧನರಾದರು ಎಂದು ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.

ವಯೋಸಹಜ ಕಾಯಿಲೆಯ ಹಿನ್ನೆಲೆ ಅವರು ಕಳೆದ 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.  94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದ ಭೈರಪ್ಪನವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ.

m

Related Posts