Featured, ಅಂಕಣ, ಸ್ಥಳೀಯ

ಸುಳ್ಯ : ಬೆಳಗಿನಿಂದ ನಿರಂತರ ಮಳೆ – ನಗರದಲ್ಲಿ ಇಲ್ಲದ ಸಮರ್ಪಕ ಚರಂಡಿ ವ್ಯವಸ್ಥೆ!!? : ಅಂಗಡಿಗಳಿಗೆ ನುಗ್ಗಿದ ಮಳೆ ನೀರು.! ಸಂಕಷ್ಟದಲ್ಲಿ ವ್ಯಾಪಾರಸ್ಥರು !!

ಸುಳ್ಯ : ಪಟ್ಟಣದಲ್ಲಿ ಬೆಳಗಿನ ಜಾವದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಪಟ್ಟಣದ ಅಸಮರ್ಪಕ ಚರಂಡಿ ವ್ಯವಸ್ಥೆಯ ಸ್ಥಿತಿ ಮತ್ತೆ ಬಯಲಾಗಿದೆ. ಸಮರ್ಪಕ ನೀರು ಹರಿಸುವ ವ್ಯವಸ್ಥೆಯಿಲ್ಲದೆ ಮಳೆ ನೀರು ಅಂಗಡಿಗಳಿಗೆ ನುಗ್ಗಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಣಿಜ್ಯ ವಲಯದಲ್ಲಿ ನಷ್ಟ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯಾಪಾರಿಗಳು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಟೀಕಿಸಿದ್ದಾರೆ. ತುರ್ತು ಪರಿಹಾರ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ, ಪ್ರತಿವರ್ಷ ಮಳೆಯಾಗುವಾಗ ಇದೇ ಸಮಸ್ಯೆ ಪುನರಾವರ್ತನೆಗೊಳ್ಳುತ್ತಿದೆ ಎಂಬುದು ವ್ಯಾಪಾರಿಗಳ ಆಕ್ರೋಶ, ಸಮಸ್ಯೆ ಪರಿಹರಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ವ್ಯಾಪಾರಸ್ಥರು ಒತ್ತಾಯಿಸಿದ್ದಾರೆ.

m

Related Posts