Featured, ಅಂಕಣ, ಸ್ಥಳೀಯ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ !!?

ಉಡುಪಿ, ಅಕ್ಟೋಬರ್ 14:ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರು ಪ್ರದೇಶದಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ಸಂಭವಿಸಿದ್ದು ಎಂದು ತಿಳಿದು ಬಂದಿದೆ

ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಸಾಮಾಜಿಕ ವಲಯದಲ್ಲಿ ಸರಳ ಮತ್ತು ಮೃದುಸ್ವಭಾವಿ ವ್ಯಕ್ತಿಯಾಗಿದ್ದ ಅವರು ಆರ್ಥಿಕ ಸಮಸ್ಯೆಯಿಂದ ಮನಸ್ಥಾಪಕ್ಕೆ ಒಳಗಾಗಿದ್ದರೆಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಘಟನೆಯ ನಂತರ ಬ್ರಹ್ಮಾವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

m

Related Posts