“ತಂತ್ರಜ್ಞಾನದಿಂದ ಕನ್ನಡ ಭಾಷೆ ಸೊರಗುತ್ತಿದೆ” ಪ್ರೊ. ವಿವೇಕ ರೈ
ಮಂಗಳೂರು: ‘ತಂತ್ರಜ್ಞಾನದಿಂದ ಕನ್ನಡ ಭಾಷೆ ಸೊರಗುತ್ತಿದೆ, ಹೊಸತಲೆಮಾರಿನ ಕವಿಗಳು ಕಾವ್ಯಗಳಲ್ಲಿ ಶಬ್ದಗಳನ್ನು ಕುಣಿಸುವ ಪ್ರಯತ್ನ ಮಾಡಬೇಕು’ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಪ್ರೊ.ಬಿ.ಎ ವಿವೇಕ ರೈ ಅವರು ಹೇಳಿದರು.
ಅವರು ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮಂಗಳ ಗಂಗೋತ್ರಿ ಇದರ ಸಹಭಾಗಿತ್ವದಲ್ಲಿ ಸೋಮವಾರ ಇಲ್ಲಿನ ಹಂಪನಕಟ್ಟೆ ವಿಶ್ವವಿದ್ಯಾನಿಲಯದ ರವೀಂದ್ರ ಕಲಾಭವನದಲ್ಲಿ ನಡೆದ, ಶ್ರೀಸಾಮಾನ್ಯರಿಗೆ ಪ್ರಾಚೀನ ಕನ್ನಡ ಸಾಹಿತ್ಯ ಸರಣಿ ಉಪನ್ಯಾಸ ಮಾಲಿಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಳಿಕ ವಿವೇಕ ರೈ ಅವರಿಂದ ಪಂಪನ ಕಾವ್ಯಗಳ ಉಪನ್ಯಾಸ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ. ರಾಜು ಮೊಗವೀರ, ಹಣಕಾಸು ಸಚಿವ ಪಂಚಲಿಂಗ ಸ್ವಾಮಿ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಉಪಸ್ಥಿತರಿದ್ದರು. ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ನಾಗಪ್ಪ ಗೌಡ ಸ್ವಾಗತಿಸಿ, ಡಾ. ಧನಂಜಯ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿದರು ಶ್ರೀರಕ್ಷಾ ಎಸ್.ಹೆಚ್ ಪೂಜಾರಿ ಅವರ ತಂಡ ವೀಣಾವಾದನ ನಡೆಸಿಕೊಟ್ಟರು.





m
