Featured, ಅಂಕಣ, ಸ್ಥಳೀಯ

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ದಾನಪ್ಪ ನರೋನೆ, ಮಹಾರಾಷ್ಟ್ರದಲ್ಲಿ ಬಂಧನ

ಕಲಬುರಗಿ:ಆರ್‌ಎಸ್‌ಎಸ್ (RSS) ಚಟುವಟಿಕೆಗಳಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲ್ಪಟ್ಟ ಆರೋಪಿ, ಬೆಂಗಳೂರಿನ ಸದಾಶಿವನಗರ ಪೊಲೀಸರು ಹಾಗೂ ಕಲಬುರಗಿ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಲಾತೂರ್‌ನಲ್ಲಿ ಬಂಧನಕ್ಕೊಳಗಾಗಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಅವಾಚ್ಯ ಪದಗಳಲ್ಲಿ ನಿಂದನೆ ಮಾಡಿದ್ದ ದಾನೇಶ್, ಅವರ ಮೊಬೈಲ್‌ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ. ಈ ಕುರಿತು ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಕಾಂಗ್ರೆಸ್ ಮುಖಂಡ ಮನೋಹರ್ ಅವರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ಬಳಿಕ ಎರಡೂ ರಾಜ್ಯಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ ಆರೋಪಿ ದಾನಪ್ಪ ಅಲಿಯಾಸ್ ದಾನೇಶ್‌ನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತನನ್ನು ವಿಚಾರಣೆಗಾಗಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

m

Related Posts