ಮಂಗಳೂರು:
ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಾಹೀದ್ ತೆಕ್ಕಿಲ್ ಅವರು ವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲೇ ಸೀಮಿತವಾಗದೆ, ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು

ಅವರು ಮಂಗಳೂರಿನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಆಶ್ರಯದಲ್ಲಿ ಏರ್ಪಡಿಸಿದ “ಮಿಷನ್ ಪವರ್” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಏನೇಪೋಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಅಬ್ದುಲ್ಲಾ ಕುನ್ಹಿ, ಡಾ. ಇಫ್ತಿಕರ್ ಅಲಿ ಪರೀದ್, ಸಯ್ಯದ್ ಬ್ಯಾರಿ, ಉಮರ್ ಟೀಕೆ, ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ. ಗಪೂರ್ ಅವರ ಜೊತೆ ಟಿ. ಎಂ. ಶಾಹೀದ್ ತೆಕ್ಕಿಲ್ ಸನ್ಮಾನ ಸ್ವೀಕರಿಸಿದರು
ಸನ್ಮಾನದ ನಂತರ ಮಾತನಾಡಿದ ಶಾಹೀದ್ ತೆಕ್ಕಿಲ್ ಅವರು,
“ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ಬಡವರ ಮತ್ತು ಶೋಷಿತರ ಕಣ್ಣೀರೊರೆಸುವ ಮೂಲಕ ನಿಜವಾದ ರಾಷ್ಟ್ರ ಸೇವೆ ಮಾಡಬೇಕು,” ಎಂದು ಹೇಳಿದರು. ಕಾರ್ಯಕ್ರಮದ ಕೊನೆಯಲ್ಲಿ ಅವರು ಆಯೋಜಕರಿಗೆ ಮತ್ತು ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.





m

