Featured, ಅಂಕಣ, ಸ್ಥಳೀಯ

ವನಗೂರಿನಿಂದ ಕುಕ್ಕೆಗೆ ಹೊರಟ ಮದುವೆ ವ್ಯಾನ್ ಪಲ್ಟಿ — ನಾಲ್ವರಿಗೆ ಗಂಭೀರ ಗಾಯ

ಸುಳ್ಯ, ಅ.30: ವನಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಹೊರಟಿದ್ದ ಮದುವೆ ವ್ಯಾನ್ ಬಿಸ್ಲೆ ಗಡಿಯಿಂದ ಸ್ವಲ್ಪ ಹಿಂದಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳಕ್ಕೆ ಮಗುಚಿ ಬಿದ್ದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಇತರ 26 ಮಂದಿ ಸಣ್ಣ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ.

ಮದುವೆ ಕಾರ್ಯಕ್ಕೆ ತೆರಳುತ್ತಿದ್ದ 30 ಜನರನ್ನು ಹೊತ್ತ ವ್ಯಾನ್ ಹಾದಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಾಗಿದೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

m

Related Posts