ಸುಳ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಮತ್ತು ಆಶೀರ್ವಾದ ಪಡೆಯಿದರು. ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್. ಅಂಗಾರ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದೇವರ ದರ್ಶನದ ನಂತರ ದೇವಾಲಯದ ಆಡಳಿತ ಮಂಡಳಿ ಸದಸ್ಯರು ವಿಜಯೇಂದ್ರ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದ್ದರು.





m
