Featured, ಅಂಕಣ, ಸ್ಥಳೀಯ

ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ನಿಧನ ಹಿನ್ನಲೆ ಸರ್ಕಾರಿ ಕಛೇರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿಲ್ಲ!!!;

ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಇನ್ನಿಲ್ಲ. ನವೆಂಬರ್ 2ರಿಂದ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಉಸಿರಾಟ ಸಮಸ್ಯೆಯಿಂದ ಮಂಗಳವಾರ ನಿಧನರಾದರು.

ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ‌.

ವ್ಯಕ್ತಮಾತೆ ನಾಡೋಜ ಡಾ. ಸಾಲುಮರದ ತಿಮ್ಮಕ್ಕ, ಪದ್ಮಶ್ರೀ ಪುರಸ್ಕೃತರು ಹಾಗೂ ಮಾನ್ಯ ಪರಿಸರ ರಾಯಭಾರಿ, ಕರ್ನಾಟಕ ಸರ್ಕಾರ, ಇವರು ದಿನಾಂಕ:14.11.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಆದರೆ ಈ ಸಂಬಂಧ ಈವರೆಗೂ ಸರ್ಕಾರಿ ರಜೆ ಘೋಷಣೆಯಾಗಿರುವುದಿಲ್ಲ

Related Posts