Featured, ಅಂಕಣ, ಸ್ಥಳೀಯ

ಅರಂತೋಡು: ಘನ ತ್ಯಾಜ್ಯ ಘಟಕ ಮರುನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯರಿಂದ ಗುದ್ದಲಿ ಪೂಜೆ

ಅರಂತೋಡಿನಲ್ಲಿ ಕೆಲವು ತಿಂಗಳ ಹಿಂದೆ ಅಪಘಾತದಲ್ಲಿ ಸಂಪೂರ್ಣ ಹಾನಿಗೊಳಗಾದ ಘನ ತ್ಯಾಜ್ಯ ಸಂಸ್ಕರಣಾ ಘಟಕದ ಮರುನಿರ್ಮಾಣ ಕಾರ್ಯಕ್ಕೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಶಾಸಕಿ ಮಾತನಾಡಿ, “ಅರಂತೋಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ವ್ಯವಸ್ಥೆಯನ್ನು ಬಲಪಡಿಸಲು ಘಟಕದ ಮರುನಿರ್ಮಾಣ ಅತ್ಯಂತ ಅಗತ್ಯ. ಶೀಘ್ರದಲ್ಲೇ ಸಂಪೂರ್ಣ ಸೌಕರ್ಯಗಳೊಂದಿಗೆ ಘಟಕ ಕಾರ್ಯಾರಂಭವಾಗುವಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೇಶವ ಆಡ್ತಲೆ, ರಾಜ್ಯ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷ ಶಾಹಿದ್ ತೆಕ್ಕಿಲ್, ಅರಂತೋಡು ಸೊಸೈಟಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಪ್ಪ ಮೇದಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪ್ರಮುಖ ನಾಯಕರು, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ಘಟಕದ ಮರುನಿರ್ಮಾಣ ಕಾರ್ಯ ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.

ಅರಂತೋಡು ಪ್ರದೇಶದ ಸ್ವಚ್ಛತೆ ನಿರ್ವಹಣೆಗೆ ಹೊಸ ಶಕ್ತಿ ತುಂಬುವ ಕಾರ್ಯಾರಂಭಕ್ಕೆ ಸ್ಥಳೀಯರಿಂದ ಸಂತೋಷ ವ್ಯಕ್ತವಾಯಿತು.

m

Related Posts