Featured, ಇತರೆ, ಸ್ಥಳೀಯ

ಕಾಸರಗೋಡು : ಹನಾನ್ ಶಾ ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು : ನಿಯಮ ಉಲ್ಲಂಘಿಸಿದ ಆಯೋಜಕರ ವಿರುದ್ಧ ಪ್ರಕರಣ ದಾಖಲು!

ಕಾಸರಗೋಡು ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ತೀವ್ರ ನೂಕುನುಗ್ಗಲು ಮತ್ತು ಕಾಲ್ತುಳಿತ ಸಂಭವಿಸಿದ್ದು, ಇದಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದ ಪೊಲೀಸರು  ನಿಯಮ ಉಲ್ಲಂಘಿಸಿದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ

ಕಾಸರಗೋಡು

ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಮತ್ತು ಕಾಲ್ತುಳಿತದ ಘಟನೆ ಸಂಭವಿಸಿದೆ. ಈ ಅವ್ಯವಸ್ಥೆಗೆ ಕಾರ್ಯಕ್ರಮ ಆಯೋಜಕರ ನಿರ್ಲಕ್ಷ್ಯವೇ ಮೂಲ ಕಾರಣ ಎಂದು ಕಾಸರಗೋಡು ಪೊಲೀಸರು ತಿಳಿಸಿದ್ದಾರೆ.

ಯುವಜನ ಸಂಘಟನೆ ‘ಫ್ರೀ’ ಆಯೋಜಿಸಿದ್ದ ಈ ರಸಮಂಜರಿ ಕಾರ್ಯಕ್ರಮಕ್ಕೆ ಮೂರು ಸಾವಿರ ಮಂದಿಗೆ ಮಾತ್ರ ಪ್ರವೇಶ ಪಾಸ್ ನೀಡುವಂತೆ ಪೊಲೀಸರು ಮುನ್ನೆಚ್ಚರಿಕೆಯಾಗಿ ಲಿಖಿತ ಸೂಚನೆ ನೀಡಿದ್ದರೂ, ಆಯೋಜಕರು ಈ ನಿಯಮವನ್ನು ಲಂಘಿಸಿ ಹತ್ತು ಸಾವಿರಕ್ಕೂ ಹೆಚ್ಚು ಪಾಸ್‌ಗಳನ್ನು ಹಂಚಿದ ಬಗ್ಗೆ ಮಾಹಿತಿ ದೊರಕಿದೆ. ನಿರೀಕ್ಷೆಗೂ ಮೀರಿ ಜನಸ್ತೋಮ ಆಗಮಿಸಿದ್ದರಿಂದ ಪರಿಸ್ಥಿತಿ ನಿಯಂತ್ರಣ ತಪ್ಪಿ ನೂಕುನುಗ್ಗಲು ಮತ್ತು ಕಾಲ್ತುಳಿತದ ಸ್ಥಿತಿ ಉಂಟಾಯಿತು.

ಈ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿ, ನಿಯಮ ಉಲ್ಲಂಘನೆ ಮತ್ತು ನಿರ್ಲಕ್ಷ್ಯದ ಆರೋಪದ ಮೇರೆಗೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದೆ ಇಂತಹ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭದ್ರತೆ ಮತ್ತು ನಿಯಮ ಪಾಲನೆ ಕಡ್ಡಾಯ ಎಂದು ಪೊಲೀಸರು ಸೂಚಿಸಿದ್ದಾರೆ.

Related Posts