ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ದುರ್ಬಲವಾಗಿದ್ದರೂ, ಚಂಡಮಾರುತದ ಪರಿಣಾಮವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ.

ಬೆಂಗಳೂರು
ಶ್ರೀಲಂಕಾ ಕರಾವಳಿ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಸಕ್ರಿಯಗೊಂಡಿರುವ ‘ದಿತ್ವಾ’ ಚಂಡಮಾರುತ ಶೀಘ್ರವೇ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರ ಕರಾವಳಿಯತ್ತ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ನವೆಂಬರ್ 30ರವರೆಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ರಾಜ್ಯದಲ್ಲಿ ತೀವ್ರ ಚಳಿ ಕಾಣಿಸಿಕೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಮಳೆ–ಗಾಳಿ ಚಟುವಟಿಕೆ ಹೆಚ್ಚುವ ಸಾಧ್ಯತೆ ಇದೆ. ಚಂಡಮಾರುತವು ಗಂಟೆಗೆ 13 ಕಿ.ಮೀ ವೇಗದಲ್ಲಿ ಉತ್ತರ–ವಾಯುವ್ಯ ದಿಕ್ಕಿಗೆ ಸಾಗುತ್ತಿದೆ.
ಇದರ ಜೊತೆಗೆ ಮಲಕ್ಕಾ ಜಲಸಂಧಿಯಲ್ಲಿ ವಾಯುಭಾರ ಕುಸಿತದಿಂದ ರೂಪುಗೊಂಡ ‘ಸೆನ್ಸರ್’ ಚಂಡಮಾರುತ ಪೂರ್ವಕ್ಕೆ ಚಲಿಸಿ ಮುಂದಿನ ಎರಡು ದಿನಗಳಲ್ಲಿ ದುರ್ಬಲಗೊಳ್ಳುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ದುರ್ಬಲವಾಗಿದ್ದರೂ, ಚಂಡಮಾರುತದ ಪರಿಣಾಮವಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ.
ಬಳ್ಳಾರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಒಣ ಹವೆ ಮುಂದುವರಿಯಬಹುದು.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ 17°C ಇರಲಿದೆ.