Featured, ಇತರೆ, ಸ್ಥಳೀಯ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಭಾನುವಾರ ವಾರ್ಷಿಕ ಕ್ರೀಡಾ ಕೂಟವು ವಿಜೃಂಭಣೆಯಿಂದ ನಡೆಯಿತು. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ. ಎಂ. ಶಹೀದ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು. ಕ್ರೀಡೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ವೃದ್ಧಿಗೆ ಅತ್ಯಂತ ಉಪಯುಕ್ತವೆಂದು ಅವರು ತಿಳಿಸಿದರು. ಅನ್ಸಾರಿಯಾ ಎಜುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿಯಿಂದ ಧ್ವಜಾರೋಹಣ ನೆರವೇರಿದ್ದು, ಶಾಲಾ ಆಡಳಿತ, ಶಿಕ್ಷಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾ ಕೂಟವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕ್ರೀಡಾ ಕೂಟದ ಉದ್ಘಾಟನೆಯನ್ನು ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಟಿ. ಎಂ. ಶಹೀದ್ ಅವರು ನೆರವೇರಿಸಿ ಕ್ರೀಡಾಳುಗಳ ವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆ ಮಾನಸಿಕ ಹಾಗೂ ದೈಹಿಕ ಕ್ಷಮತೆ ವೃದ್ಧಿಗೆ ಅತ್ಯಂತ ಸಹಕಾರಿ ಎಂದು ಹೇಳಿದರು.
ಅನ್ಸಾರಿಯಾ ಎಜುಕೇಶನ್ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ, ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕರಾದ ಇಲ್ಯಾಸ್ ಕೆ. ಕಾಶಿಪಟ್ಟಣ ಸ್ವಾಗತ ಭಾಷಣ ಮಾಡಿದರು. ಗ್ರೀನ್ ವ್ಯೂ ಸಂಸ್ಥೆಯ ಸಂಚಾಲಕರಾದ ಕೆ. ಎಂ. ಮುಸ್ತಫ ಅವರು ಪ್ರಸ್ತಾವನೆ ಸಲ್ಲಿಸಿದರು. ಅಧ್ಯಕ್ಷರಾದ ಅಬ್ದುಲ್ ಮಜೀದ್ ಬಣ್ಣ ಬಣ್ಣದ ಬಲೂನ್‌ಗಳನ್ನು ಬಾನೆತ್ತರಕ್ಕೆ ಹಾರಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಶಾಲಾ ಸಂಯೋಜಕರಾದ ಕೆ. ಎಸ್. ಉಮ್ಮರ್, ಶಾಫಿ ಕುತ್ತಾಮೊಟ್ಟೆ, ಆಡಳಿತ ಸಮಿತಿ ಸದಸ್ಯರಾದ ಎಸ್. ಎಂ. ಅಬ್ದುಲ್ ಹಮೀದ್, ಉಬೈದುಲ್ಲಾ ಸಾಲಿಕಟ್ಟೆಕ್ಕಾರ್ಸ್, ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ಎನ್. ಎ. ಅಬ್ದುಲ್ಲ, ಸದಸ್ಯ ಎಸ್. ಪಿ. ಅಬೂಬಕ್ಕರ್, ನಗರ ಪಂಚಾಯತ್ ನಿಕಟಪೂರ್ವ ಸದಸ್ಯ ಸಿದ್ದೀಕ್ ಕೊಕ್ಕೋ ಉಪಸ್ಥಿತರಿದ್ದರು.

Related Posts