ಆಲಂಕಾರಿನಲ್ಲಿ ಟೆಂಪೋ ಡಿಕ್ಕಿ: ಪಾದಚಾರಿ ಕಾಸರಗೋಡು ಮುಹಿಮ್ಮಾತ್ ಶಿಕ್ಷಣ ಸಂಸ್ಥೆಯ ಶಿಕ್ಷಕ ಅಬ್ದುಲ್ ಖಾದರ್ ಸಖಾಫಿ ಮೃತ್ಯು
ಪುತ್ತೂರು:
ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ದುರ್ಘಟನೆ ಪುತ್ತೂರು ತಾಲೂಕಿನ ಕೊಯಿಲದ ಆತೂರಿನಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಅಪಘಾತದಲ್ಲಿ ಕಡಬ ತಾಲೂಕಿನ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೋಮವಾರ ಮಧ್ಯಾಹ್ನ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟೆಂಪೋ ಪಾದಚಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಮಾಹಿತಿ ಪಡೆದ ಪುತ್ತೂರು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ

Scroll To Top