ಸುಳ್ಯ: ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸೋಮವಾರ ಗಣರಾಜ್ಯೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.
ಈ ಸಂದರ್ಭ ಧ್ವಜಾರೋಹಣವನ್ನು ಸುಳ್ಯ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಉದಯ ಭಟ್ ಅವರು ನೆರವೇರಿಸಿದರು.
ನಂತರ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್ ಅವರು ಗಣರಾಜ್ಯೋತ್ಸವದ ಸಂದೇಶ ನೀಡಿ, ದೇಶದ ಸಂವಿಧಾನ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಕಾನೂನು ರಕ್ಷಕರ ಕರ್ತವ್ಯದ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಬಿ.ಪಿ. ಸಂತೋಷ್ ಸೇರಿದಂತೆ ವೃತ್ತ ನಿರೀಕ್ಷಕರ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಗೌರವ ಸಲ್ಲಿಸಿದರು.
