ಇತರೆ, ಸ್ಥಳೀಯ

ಪೆಟ್ರೋಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಚಾಲಕ

ಕೇರಳ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಪುತ್ತೂರು ಕಡೆಗೆ ಎಸ್ಕೇಪ್..!???

ಅರಂತೋಡು: ಕೇರಳ ಕಾಸರಗೋಡು ನೋಂದಣಿ ಸಂಖ್ಯೆ ಹೊಂದಿದ್ದ (KL 14 111) Maruti Suzuki Alto 800 ಕಾರೊಂದು ಅರಂತೋಡು ನಯಾರ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಹಣ ನೀಡದೇ ಕಾರಿನ ಚಾಲಕ ಪರಾರಿಯಾದ ಘಟನೆ ವರದಿಯಾಗಿದೆ.
ಮಾಹಿತಿಯ ಪ್ರಕಾರ, ಕಾರು ಚಾಲಕನು ರೂ. 2,510 ಮೌಲ್ಯದ ಪೆಟ್ರೋಲ್ ತುಂಬಿಸಿಕೊಂಡ ಬಳಿಕ ಹಣ ಪಾವತಿಸದೇ ಸ್ಥಳದಿಂದ ಹೊರಟಿದ್ದಾನೆ. ಘಟನೆ ತಿಳಿದ ತಕ್ಷಣ ಸಿಬ್ಬಂದಿಗಳು ಮಾಹಿತಿ ನೀಡಿದ್ದು, ಜಾಲ್ಲೂರು ಚೆಕ್ ಪೋಸ್ಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯ ಆಟೋ ಚಾಲಕರು ಹಾಗೂ ಜಾಲ್ಲೂರು ಪೆಟ್ರೋಲ್ ಬಂಕ್ ಸಿಬ್ಬಂದಿಗಳು ವಾಹನವನ್ನು ತಡೆಹಿಡಿಯಲು ಪ್ರಯತ್ನಿಸಿದ್ದಾರೆ.
ಆದರೆ, ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಪುತ್ತೂರು ಕಡೆಗೆ ವೇಗವಾಗಿ ಪರಾರಿಯಾದ್ದಾಗಿ ತಿಳಿದು ಬಂದಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಕಾರಿನ ಗುರುತು ಹಾಗೂ ಚಾಲಕನ ಪತ್ತೆ ಕಾರ್ಯ ಮುಂದುವರಿದಿದೆ.

 

Related Posts