ಮಾರ್ಚ್ 22: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ವಾಗ್ವಾದ ಗಂಭೀರ ತಿರುವು ಪಡೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯನ್ನು ತಕ್ಷಣ ಪುನಃ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಎಚ್ಚರಿಕೆ ನೀಡಿದ ಬಳಿಕ, ಇರಾನ್ ಸೇನೆ ತೀವ್ರ ಪ್ರತಿಕ್ರಿಯೆ ನೀಡಿದೆ.
ಇರಾನ್‌ನ ಮಿಲಿಟರಿ ಕಾರ್ಯಾಚರಣೆಗಳ ಮುಖ್ಯ ಕಮಾಂಡ್ ಖತಮ್ ಅಲ್-ಅನ್ಬಿಯಾ ಹೊರಡಿಸಿದ ಹೇಳಿಕೆಯಲ್ಲಿ, ದೇಶದ ಇಂಧನ ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ಯಾವುದೇ ದಾಳಿ ನಡೆದರೆ ಅಮೆರಿಕ ಹಾಗೂ ಅದರ ಮಿತ್ರ ರಾಷ್ಟ್ರಗಳಿಗೆ ಸೇರಿದ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ಉಪ್ಪುನೀರಿನ ಸಂಸ್ಕರಣಾ ಘಟಕಗಳನ್ನು ಗುರಿಯಾಗಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಎಂದು ಅಲ್ ಜಝಿರಾ ವರದಿ ಮಾಡಿದೆ
ಪ್ರಸ್ತುತ ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ ಜಾಗತಿಕ ವಾಣಿಜ್ಯಕ್ಕೆ ಪ್ರಮುಖವಾದ ಹೋರ್ಮುಜ್ ಸಮುದ್ರಸಂಧಿ ಜಲಸಂಧಿ ಭಾಗಶಃ ಮುಚ್ಚಲ್ಪಟ್ಟಿದ್ದು, ಇದರಿಂದ ತೈಲ ಸಾಗಾಟ ಮತ್ತು ವ್ಯಾಪಾರ ಚಟುವಟಿಕೆಗಳ ಮೇಲೆ ದೊಡ್ಡ ಪರಿಣಾಮ ಉಂಟಾಗಿದೆ.
ಈ ಹಿನ್ನೆಲೆದಲ್ಲಿ, ಹಡಗು ಸಂಚಾರವನ್ನು ಪುನಃ ಪ್ರಾರಂಭಿಸಲು ಅಮೆರಿಕವು ಇರಾನ್‌ಗೆ 48 ಗಂಟೆಗಳ ಗಡುವು ನೀಡಿರುವುದು ಪರಿಸ್ಥಿತಿಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇರು ದೇಶಗಳ ನಡುವಿನ ಈ ಘರ್ಷಣೆ ಜಾಗತಿಕ ಇಂಧನ ಮಾರುಕಟ್ಟೆ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ





m
