Featured, ಇತರೆ, ಸ್ಥಳೀಯ

ಸಂಪಾಜೆ ಗೂನಡ್ಕ ತೆಕ್ಕಿಲ್ ಶಾಲಾ ಅಭಿವೃದ್ಧಿ ಕುರಿತು ಸಮಾಲೋಚನಾ ಸಭೆ

ಸಂಪಾಜೆ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯ ಅಭಿವೃದ್ಧಿ ಮತ್ತು ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಅಗತ್ಯ ಕ್ರಮಗಳು, ಮೂಲಭೂತ ಸೌಕರ್ಯಗಳ ವೃದ್ಧಿ ಹಾಗೂ ಸಹಕಾರದ ಅಗತ್ಯತೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಶಾಲೆಯ ಅಭಿವೃದ್ಧಿಗೆ ತಮ್ಮ ಸಹಕಾರವನ್ನು ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.

ಸಂಪಾಜೆ: ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯ ಸಮಗ್ರ ಅಭಿವೃದ್ಧಿ, ಸರ್ವತೋಮುಖ ಬೆಳವಣಿಗೆ ಮತ್ತು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಇಂದು ಶಾಲೆಯ ಸಭಾಭವನದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಶಾಲೆಯ ಭವಿಷ್ಯದ ಯೋಜನೆಗಳು, ಮೂಲಭೂತ ಸೌಕರ್ಯಗಳ ವೃದ್ಧಿ, ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಕ್ರಮಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಶಾಲೆಯನ್ನು ಉಳಿಸಿ ಬೆಳೆಸುವುದು ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಟಿ.ಎಂ. ಶಹೀದ್ ತೆಕ್ಕಿಲ್, ನಿವೃತ್ತ ಮುಖ್ಯ ಶಿಕ್ಷಕರಾದ ಅಬ್ದುಲ್ಲಾ ಮಾಸ್ವರ್ (ಅರಂತೋಡು) ಮತ್ತು ದಾಮೋದರ ಮಾಸ್ವರ್ (ಗೂನಡ್ಕ), ಸಂಪಾಜೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆ ಸುಮತಿ ಶಕ್ತಿವೇಲು, ಮಾಜಿ ಉಪಾಧ್ಯಕ್ಷ ಎಸ್.ಕೆ. ಹನೀಫ್, ಮಾಜಿ ಅಧ್ಯಕ್ಷ ಜಿ.ಕೆ. ಹನೀಫ್, ತಾಜ್ ಮಹಮ್ಮದ್, ದಿನಕರ ಸಣ್ಣಮನೆ, ಅಶ್ರಫ್ ಗುಂಡಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಖಾದರ್ ಮೊಟ್ಟೆಂಗಾರ್, ಸಾಧಿಕ್ ಮಾಸ್ವರ್ ಸೇರಿದಂತೆ ಹಲವರು ಭಾಗವಹಿಸಿದರು.  ಪೋಷಕರ ಪ್ರತಿನಿಧಿಗಳಾಗಿ ಅಬ್ದುಲ್ ಸಲಾಂ, ಇಸಾಕ್ಕುದ್ದೀನ್, ಮುಖ್ಯ ಶಿಕ್ಷಕರಾದ ಸಂಪತ್ ಜೆ.ಡಿ., ಶಿಕ್ಷಕ ವೃಂದದವರಾದ ಸಾಧಿಕ್ ಎ.ಕೆ., ಆಯಿಷತ್ ಸಬೀರಾ, ಬುಶ್ರಾ ಕೆ., ಆಯಿಷತ್ ಸುನೈನಾ, ಕೈರುನ್ನೀಸ ಎಸ್.ಇ., ಸೋನಿಯಾ ಪಿ., ದಿಲ್‌ಶಾನಾ, ಆಯಿಷತ್ ಇಶಾನಾ ಹಾಗೂ ಸ್ಥಳೀಯ ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.
ಸಭೆಯ ಅಂತ್ಯದಲ್ಲಿ ಶಾಲೆಯ ಅಭಿವೃದ್ಧಿಗೆ ಎಲ್ಲರಿಂದಲೂ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತವಾಯಿತು.
m

Related Posts