Featured, ಇತರೆ, ಸ್ಥಳೀಯ

ಇಂದಿನಿಂದ 1884 ರೂಲ್ಸ್ ಪಾಲಿಸಿದ ಪೆಟ್ರೋಲ್ ಬಂಕ್ ಗಳು : ಇನ್ನೂ ಮುಂದೆ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಪೆಟ್ರೊಲ್, ಡಿಸೀಲ್ ಸಿಗೊಲ್ಲ ?!..

ಗ್ರಾಹಕರಿಗೆ ಮುನ್ಸೂಚನೆ ನೀಡದೆ ಆದೇಶ ಪಾಲಿಸಿದ ಪೆಟ್ರೋಲ್ ಬಂಕ್ ಗಳು : ಪರದಾಡಿದ ಗ್ರಾಹಕ.!!

ಇತ್ತೀಚಿನ ದಿನಗಳಲ್ಲಿ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂಧನ ಕೊರತೆಯಾಗಲಿದೆ ಎಂಬ ಸುಳ್ಳು ವದಂತಿಗಳು ಹರಡುತ್ತಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೆಟ್ರೋಲ್ ಬಂಕ್‌ಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಹಾಗೂ ಕ್ಯಾನ್‌ಗಳಲ್ಲಿ ಪೆಟ್ರೋಲ್ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ….. ಮುಂದೆ ಓದಿ

ಇಂದು ಬೆಳಿಗ್ಗೆ ಪೇಟೆ ಪ್ರದೇಶದಲ್ಲಿ ಪೆಟ್ರೋಲ್ ಕೊರತೆಯಿಂದ ಒರ್ವರ ಸ್ಕೂಟಿ ಬಾಕಿಯಾದ ಘಟನೆಯಿಂದ ಒಂದು ಹೊಸ ನಿಯಮದ ಕುರಿತು ಗಮನ ಸೆಳೆದಿದೆ. ದೈನಂದಿನ ರೀತಿಯಲ್ಲಿ ಪ್ಲಾಸ್ಟಿಕ್ ಬಾಟಲ್ ಹಿಡಿದು ಪೆಟ್ರೋಲ್ ಬಂಕ್‌ಗೆ ತೆರಳಿದ ವ್ಯಕ್ತಿಗೆ ಅಲ್ಲಿ ಅಚ್ಚರಿಯ ಮಾಹಿತಿ ಸಿಕ್ಕಿದೆ.
ಬಂಕ್ ಸಿಬ್ಬಂದಿಗಳು ನೀಡಿದ ಮಾಹಿತಿಯ ಪ್ರಕಾರ, ಇಂದಿನಿಂದ ಯಾವುದೇ ಪೆಟ್ರೋಲ್ ಬಂಕ್‌ಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಪೆಟ್ರೋಲ್ ಅಥವಾ ಡೀಸೆಲ್ ನೀಡುವುದಿಲ್ಲ. ಸುರಕ್ಷತಾ ಕಾರಣಗಳಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗ್ರಾಹಕರು ಪರ್ಯಾಯವಾಗಿ ಏನು ಮಾಡಬೇಕು ಎಂಬ ಪ್ರಶ್ನೆಗೆ ಉತ್ತರವಾಗಿ, “ಇಂಧನ ಸಾಗಾಟಕ್ಕಾಗಿ ಅನುಮೋದಿತ ವಿಶೇಷ ಕ್ಯಾನ್‌ಗಳು ಲಭ್ಯವಿದ್ದು, ಅವುಗಳಲ್ಲಿ ಮಾತ್ರ ಪೆಟ್ರೋಲ್ ತುಂಬಿ ಕೊಡಲಾಗುತ್ತದೆ” ಎಂದು ಸಿಬ್ಬಂದಿಗಳು ಸ್ಪಷ್ಟಪಡಿಸಿದ್ದಾರೆ.
ಈ ಹೊಸ ನಿಯಮದ ಬಗ್ಗೆ ಮುಂಚಿತ ಮಾಹಿತಿ ಇಲ್ಲದ ಕಾರಣ ಹಲವರು ಸಂಕಷ್ಟಕ್ಕೆ ಒಳಗಾಗಿದ್ದು, ತುರ್ತು ಸಂದರ್ಭಗಳಲ್ಲಿ ಇಂಧನ ಪಡೆಯಲು ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸುವ ಅಗತ್ಯವಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಒಟ್ಟಾರೆ, ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತಂದ ಈ ಕ್ರಮವು ಗ್ರಾಹಕರಿಗೆ ಹೊಸ ಅನುಭವವಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಎನಿದು ರೂಲ್ಸ್

ಪೆಟ್ರೋಲ್ ಹಾಗೂ ಡೀಸೆಲ್ ಅನ್ನು ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ಕ್ರಮಗಳು ಜಾರಿಗೆ ಬಂದಿದೆ. ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಅನಧಿಕೃತ ಪಾತ್ರೆಗಳಲ್ಲಿ ಇಂಧನ ನೀಡುವುದನ್ನು ತಪ್ಪಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಈ ಕ್ರಮಕ್ಕೆ ಮೂಲವಾಗಿ ಇರುವುದೇ ಬ್ರಿಟಿಷ್ ಕಾಲದಲ್ಲಿ ಜಾರಿಯಾದ Petroleum Act, 1884 ಮತ್ತು ಅದರಡಿ ರೂಪುಗೊಂಡ ನಿಯಮಗಳು. ಈ ಕಾನೂನು ಪ್ರಕಾರ ಪೆಟ್ರೋಲಿಯಂ ಪದಾರ್ಥಗಳನ್ನು ಸುರಕ್ಷಿತ ಮತ್ತು ಮಾನ್ಯವಾದ ಪಾತ್ರೆಗಳಲ್ಲಿ ಮಾತ್ರ ಸಂಗ್ರಹಿಸಬೇಕು ಮತ್ತು ಸಾಗಿಸಬೇಕು ಎಂಬುದಾಗಿ ಸ್ಪಷ್ಟಪಡಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಪ್ಲಾಸ್ಟಿಕ್ ಬಾಟಲ್‌ಗಳು ಅಗ್ನಿ ಅಪಾಯಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಿರುವುದರಿಂದ ಅವುಗಳಲ್ಲಿ ಇಂಧನ ನೀಡುವುದು ಅಪಾಯಕಾರಿಯಾಗಿದೆ. ಹೀಗಾಗಿ ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳಲ್ಲಿ ಮಾನ್ಯವಾದ ಲೋಹದ ಕ್ಯಾನ್‌ಗಳು ಅಥವಾ ಸುರಕ್ಷಿತ ಡಬ್ಬಿಗಳಲ್ಲಿ ಮಾತ್ರ ಇಂಧನ ನೀಡಲಾಗುತ್ತದೆ.
ಇದರಿಂದ ಸಾಮಾನ್ಯ ಜನರು ತುರ್ತು ಸಂದರ್ಭಗಳಲ್ಲಿ ಬಾಟಲ್‌ಗಳನ್ನು ತೆಗೆದುಕೊಂಡು ಹೋಗಿ ಇಂಧನ ಪಡೆಯುವ ಪದ್ಧತಿಗೆ ಬ್ರೇಕ್ ಬೀಳಲಿದೆ. ನಿಯಮ ಉಲ್ಲಂಘಿಸಿದರೆ ಬಂಕ್‌ಗಳ ಮೇಲೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದಿಢೀರ್ ಆದೇಶದ ಹಿಂದಿನ ಕಾರಣವೇನು..? ಇಂಧನ ಕೊರತೆ ಭೀತಿ ನಡುವೆ ಸರ್ಕಾರದ ಸ್ಪಷ್ಟನೆ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬ ವದಂತಿಗಳ ನಡುವೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ಟ್ಯಾಂಕ್‌ಗಳಿಗೆ ಮಾತ್ರ ಇಂಧನ ಭರ್ತಿ ಮಾಡಲು ಸೂಚನೆ ನೀಡಲಾಗಿದ್ದು, ಬಾಟಲಿ ಅಥವಾ ಪ್ರತ್ಯೇಕ ಕಂಟೈನರ್‌ಗಳಲ್ಲಿ ಇಂಧನ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧೀನ ಕಾರ್ಯದರ್ಶಿ ನಾಗರಾಜ್ ಬಿ.ಇ. ಪ್ರಕಟಣೆ ಹೊರಡಿಸಿ, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಅಮೆರಿಕಾ–ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ತೈಲ ಸಾಗಣೆಗೆ ಅಡ್ಡಿಯಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ. ಈ ಬೆಳವಣಿಗೆಗಳ ಹಿನ್ನೆಲೆದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಂಧನ ಕೊರತೆಯ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ.
ಈ ವದಂತಿಗಳ ಪರಿಣಾಮವಾಗಿ ಜನರು ಪೆಟ್ರೋಲ್ ಬಂಕ್‌ಗಳಿಗೆ ಬಾಟಲಿ ಹಾಗೂ ಕ್ಯಾನ್‌ಗಳೊಂದಿಗೆ ದೌಡಾಯಿಸಿ ಇಂಧನ ಸಂಗ್ರಹಿಸಲು ಮುಂದಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ಅನಗತ್ಯ ಗೊಂದಲ ಉಂಟಾಗುವ ಜೊತೆಗೆ ಭದ್ರತಾ ಅಪಾಯಗಳೂ ಹೆಚ್ಚುವ ಸಾಧ್ಯತೆ ಇದೆ.
ಆದರೆ, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಕೊರತೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರದಿಂದ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಇಂಧನ ಸರಬರಾಜು ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದೆ.
ಪ್ರತ್ಯೇಕ ಕಂಟೈನರ್‌ಗಳಲ್ಲಿ ಇಂಧನ ಸಂಗ್ರಹಿಸುವುದು ಅಪಾಯಕಾರಿ ಹಾಗೂ ಕಾನೂನುಬಾಹಿರವಾಗಿದ್ದು, ಅನಾಹುತಗಳಿಗೆ ಕಾರಣವಾಗಬಹುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರು ಆತಂಕಕ್ಕೊಳಗಾಗದೆ ಅಗತ್ಯಕ್ಕಿಂತ ಹೆಚ್ಚು ಇಂಧನ ಸಂಗ್ರಹಿಸುವುದನ್ನು ತಪ್ಪಿಸಿ ಸರ್ಕಾರದ ಕ್ರಮಕ್ಕೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಬಂಕ್ ಮಾಲೀಕರ ಮನವಿ

ಸಾರ್ವಜನಿಕರು ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು. ಬಾಟಲಿಗಳಲ್ಲಿ ಪೆಟ್ರೋಲ್ ನೀಡದಂತೆ ನಮಗೆ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ ಇದೆ. ವಾಹನಗಳಿಗೆ ನೇರವಾಗಿ ಇಂಧನ ತುಂಬಿಸಲು ಯಾವುದೇ ತೊಂದರೆಯಿಲ್ಲ. ತುರ್ತು ಸಂದರ್ಭಗಳ ಹೊರತಾಗಿ ಸಾರ್ವಜನಿಕರು ಸಹಕರಿಸಬೇಕು” ಎಂದು ಸುಳ್ಯದ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ವಿನಂತಿಸಿದ್ದಾರೆ
m

 

ಕ್ ಮಾಲೀಕರ ಮನವಿ

Related Posts