ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ತ್ರಿಶೂರ್ ಜಿಲ್ಲೆಯ ಕುನ್ನತುನಾಡ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಅವರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿ ಮೂಲಕ ಅವರು ಕುನ್ನತುನಾಡ್ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಸಂಘಟನಾ ಕಾರ್ಯಗಳನ್ನು ಅವಲೋಕಿಸುವುದರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ವಿ.ಪಿ. ಸಜೀಂದ್ರನ್ ಪರ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ನಿರ್ದೇಶನದಂತೆ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್ ಅವರು ಈ ನೇಮಕಾತಿಯನ್ನು ಮಾಡಿರುವುದಾಗಿ ತಿಳಿದುಬಂದಿದೆ.
ಇತ್ತೀಚೆಗೆ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಎಐಸಿಸಿ ತರಬೇತುದಾರರಿಂದ ಆಯೋಜಿಸಲಾದ ತರಬೇತಿ ಶಿಬಿರದಲ್ಲಿ ಕೆ.ಎಂ. ಮುಸ್ತಫ ಅವರು ಭಾಗವಹಿಸಿದ್ದರು. ಈ ಅನುಭವವು ಅವರಿಗೆ ಚುನಾವಣಾ ಕಾರ್ಯಚಟುವಟಿಕೆಗಳಲ್ಲಿ ಇನ್ನಷ್ಟು ಚುರುಕು ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ನೇಮಕಾತಿ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸಲು ಇದು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.





m
