ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನಲೆಯಲ್ಲಿ ಎಂಟನೇ ವಾರ್ಡ್ನ ವಿನಾಯಕ ನಗರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ. ಎಂ. ಶಾಹಿದ್ ತೆಕ್ಕಿಲ್ ಅವರು ಸ್ಥಳೀಯ ಮುಖಂಡ ಚಂದ್ರು ಶಿವಾಜಿ ಅವರೊಂದಿಗೆ ಮನೆ ಮನೆ ಭೇಟಿ ನಡೆಸಿದರು.

ಮತದಾರರನ್ನು ಭೇಟಿ ಮಾಡಿದ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ಟೀಕೆ ವ್ಯಕ್ತಪಡಿಸಿದ ಅವರು, ಗ್ಯಾಸ್ ಬೆಲೆ ಏರಿಕೆ ಹಾಗೂ ಗ್ಯಾಸ್ ಅಭಾವದಿಂದ ಜನರು ಸಂಕಷ್ಟಕ್ಕೆ ಒಳಗಾಗಿರುವುದನ್ನು ಉಲ್ಲೇಖಿಸಿದರು. ಜೊತೆಗೆ ಔಷಧಿ ಬೆಲೆ ಏರಿಕೆ, ರೈತರು ಮತ್ತು ಸಾಮಾನ್ಯ ಜನತೆಗೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯಗಳ ಕುರಿತು ವಿವರಿಸಿದರು.

ಈ ವೇಳೆ ಕ್ಷೇತ್ರದ ಅಭಿವೃದ್ಧಿಗೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಗಳನ್ನು ಪ್ರಸ್ತಾಪಿಸಿದ ಅವರು, ಸಮರ್ಥ ನಾಯಕತ್ವದ ಅಗತ್ಯವನ್ನು ಮತದಾರರಿಗೆ ಮನವರಿಕೆ ಮಾಡಿದರು. ಮುಂದಿನ ಚುನಾವಣೆಯಲ್ಲಿ ಕನಿಷ್ಠ 40 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಲು ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ರಂಗನಾಥ್, ಅಭ್ಯರ್ಥಿ ಸಮರ್ಥ್ ಶಾಮನೂರು, ಪದ್ಮರಾಜ್ ಆರ್ ಪೂಜಾರಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.





m
