Featured, ಕ್ರೀಡೆ, ಸ್ಥಳೀಯ

IPL – 2026, ಮುಳುಗಿದ ಟೈಟಾನ್..!!! RCB ಫೈನಲ್‌ಗೆ ಭರ್ಜರಿ ಎಂಟ್ರಿ

ಧರ್ಮಶಾಲಾದಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಪ್ರದರ್ಶನ ನೀಡಿ ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ RCB ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿತು. ವಿರಾಟ್ ಕೊಹ್ಲಿ ವೇಗದ 43 ರನ್‌ಗಳ ಕಾಣಿಕೆ ನೀಡಿದರೆ, ನಾಯಕ ರಜತ್ ಪಾಟೀದಾರ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೇವಲ 33 ಎಸೆತಗಳಲ್ಲಿ 93 ರನ್ ಸಿಡಿಸಿ ತಂಡದ ಮೊತ್ತವನ್ನು ಬೃಹತ್ ಮಟ್ಟಕ್ಕೆ ಕೊಂಡೊಯ್ದರು. ಅಂತಿಮವಾಗಿ ಬೆಂಗಳೂರು 20 ಓವರ್‌ಗಳಲ್ಲಿ 254/5 ರನ್‌ಗಳ ಸವಾಲಿನ ಮೊತ್ತ ದಾಖಲಿಸಿತು
ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಶುಭ್‌ಮನ್ ಗಿಲ್ ಪಡೆಗೆ ಯಾವುದೇ ಹಂತದಲ್ಲೂ ಚೇತರಿಸಿಕೊಳ್ಳಲು ಅವಕಾಶ ನೀಡದ RCB ಬೌಲರ್‌ಗಳು ನಿರಂತರವಾಗಿ ಮೇಲುಗೈ ಸಾಧಿಸಿದರು. ರಾಹುಲ್ ತೇವಾಟಿಯಾ ಹೋರಾಟದ ಅರ್ಧಶತಕ ಸಿಡಿಸಿದರೂ, ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಗುಜರಾತ್ 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲೌಟ್ ಆಯಿತು.
ಈ ಭರ್ಜರಿ ಗೆಲುವಿನೊಂದಿಗೆ RCB ನೇರವಾಗಿ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಗುಜರಾತ್ ಟೈಟಾನ್ಸ್‌ಗೆ ಇನ್ನೊಂದು ಅವಕಾಶ ಉಳಿದಿದ್ದು, ಎರಡನೇ ಕ್ವಾಲಿಫೈಯರ್‌ನಲ್ಲಿ ಗೆದ್ದು ಫೈನಲ್ ಪ್ರವೇಶಿಸಲು ಹೋರಾಡಲಿದೆ.
m

Related Posts