Featured, ಇತರೆ, ಸ್ಥಳೀಯ

ಬಕ್ರೀದ್ ಹಬ್ಬದ ಪ್ರಯುಕ್ತ AIKMCC ಮಂಗಳೂರು ವತಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಆಹಾರ ವಿತರಣೆ,

ಮಂಗಳೂರು: ಬಕ್ರೀದ್ ಹಬ್ಬದ ಪ್ರಯುಕ್ತ ಹಲವಾರು ಕಾರುಣ್ಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ AIKMCC ಮಂಗಳೂರು ಸಿಟಿ ಸಮಿತಿಯ ವತಿಯಿಂದ ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಮಧ್ಯಾಹ್ನದ ಊಟ ವಿತರಿಸಲಾಯಿತು.
ಕಾರ್ಯಕ್ರಮಕ್ಕೆ AIKMCC ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಯ್ಯದ್ ಅಫ್ಹಾಂ ಅಲಿ ತಂಙಳ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ, ಹಂಚಿಕೆ ಮತ್ತು ಮಾನವೀಯತೆಯ ಸಂದೇಶ ಸಾರುವ ಹಬ್ಬವಾಗಿದ್ದು, ಸಮಾಜ ಸೇವೆಯ ಮೂಲಕ ಆ ಮೌಲ್ಯಗಳನ್ನು ಜೀವಂತವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಕಾರ್ಯಕ್ರಮದಲ್ಲಿ AIKMCC ಮಂಗಳೂರು ಸಿಟಿ ಸಮಿತಿಯ ಹನೀಫ್ ತೋಡಾರ್, ಮುಜೀಬ್ ತಲಂಗರ್ ಹಾಗೂ ಸಿಟಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಸೇವಾ ಕಾರ್ಯದಲ್ಲಿ ಭಾಗವಹಿಸಿದರು.
ಈ ಕಾರ್ಯಕ್ರಮವನ್ನು AIKMCC ದಕ್ಷಿಣ ಕನ್ನಡ ಜಿಲ್ಲಾ ಮೀಡಿಯಾ ವಿಂಗ್ ಪ್ರಕಟಣೆಯಲ್ಲಿ ತಿಳಿಸಿದೆ
m

Related Posts