Featured, ಇತರೆ, ಸ್ಥಳೀಯ

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರಾಜೇಶ್ವರಿ ಕೊಯನಾಡು ನೇಮಕ

ಮಡಿಕೇರಿ:- ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಶಾಸಕದ್ವಯರುಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ಕಾಂಗ್ರೆಸ್ ನಾಯಕರುಗಳ ಸಲಹೆಯ ಮೇರೆಗೆ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿಯವರ ಆದೇಶದ ಮೇರೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ರಾಜೇಶ್ವರಿ ಕೊಯನಾಡು ರವರನ್ನು ನೇಮಿಸಲಾಗಿದೆ.

ಇವರು ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾಮದ ಕೊಯನಾಡು ನಿವಾಸಿಯಾಗಿರುತ್ತಾರೆ, ಹಲವಾರು ವರ್ಷಗಳಿಂದ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಪೋಕ್ಲು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ

m

Related Posts