ಸುಳ್ಯ, ಜೂ. 5: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಕೆಎಂಸಿಸಿ (KMCC) ಆಂಬ್ಯುಲೆನ್ಸ್ ಮೂಲಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ನಿಖರ ಕಾರಣ ಹಾಗೂ ಗಾಯಗೊಂಡ ವ್ಯಕ್ತಿಯ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ





m
