Featured, ಇತರೆ, ಸ್ಥಳೀಯ

ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಇಂದು ಜಂತರ್ ಮಂತರ್‌ನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ

ನವದೆಹಲಿ, ಜೂ. 6 : ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಿಗೆ ಸಂಬಂಧಿಸಿದ ದೋಷಗಳು ಹಾಗೂ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಜಿರಳೆ ಜನತಾ ಪಕ್ಷ (ಸಿಜೆಪಿ) ಇಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಳಿಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅಗತ್ಯ ಅನುಮತಿ ಪಡೆದಿರುವುದಾಗಿ ಪಕ್ಷದ ನಾಯಕರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಪ್ರತಿಭಟನಾ ಸ್ಥಳದಲ್ಲಿ ವಿತರಿಸಲಾದ ಕರಪತ್ರದಲ್ಲಿ, “ಜವಾಬ್ದಾರಿಯನ್ನು ನಿಗದಿಪಡಿಸುವುದು, ನ್ಯಾಯವನ್ನು ಖಚಿತಪಡಿಸುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುವುದು” ಪ್ರತಿಭಟನೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಜೆಪಿ ತಿಳಿಸಿದೆ.
ಪರೀಕ್ಷಾ ಅಕ್ರಮಗಳು ಮತ್ತು ಆಡಳಿತ ವೈಫಲ್ಯಗಳ ಬಗ್ಗೆ ಕೇಂದ್ರ ಸರ್ಕಾರ ಉತ್ತರಿಸಬೇಕೆಂದು ಆಗ್ರಹಿಸಿರುವ ಪಕ್ಷ, ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿರುವ ಬೆಳವಣಿಗೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
ಇದೇ ವೇಳೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪಕ್ಷ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಈಗಾಗಲೇ 8 ಲಕ್ಷಕ್ಕೂ ಅಧಿಕ ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ತಮ್ಮ ಅರ್ಜಿಗೆ ಸಹಿ ಹಾಕಿದ್ದಾರೆ ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಜಂತರ್ ಮಂತರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ
m

Related Posts