Featured, ಇತರೆ, ಸ್ಥಳೀಯ

ಸುಳ್ಯ : ಪೈಚಾರು ಬಳಿ ಅಪಘಾತ: ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಕಾರು ಡಿಕ್ಕಿ, ಮೂವರಿಗೆ ಗಂಭೀರ ಗಾಯ

ಸುಳ್ಯ, ಜೂನ್ 7: ಸುಳ್ಯ ಸಮೀಪದ ಪೈಚಾರು ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡವರು ಸ್ಥಳೀಯ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

m

Related Posts