ಇತರೆ, ಸ್ಥಳೀಯ

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಮಕ್ಕಳ ಶಿಕ್ಷಣ ಮತ್ತು ಸಬಲೀಕರಣಕ್ಕೆ ಎಲ್ಲರೂ ಕೈಜೋಡಿಸಬೇಕು – ಟಿ.ಎಂ. ಶಾಹಿದ್ ತೆಕ್ಕಿಲ್

ಬೆಂಗಳೂರು, ಜೂನ್ 12: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರು ಹಾಗೂ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಭಾಗವಹಿಸಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಕಾರ್ಮಿಕರನ್ನಾಗಿ ದುಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ತಡೆಯುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು. ರಾಜ್ಯ ಮಕ್ಕಳ ಹಕ್ಕುಗಳ ಆಯೋಗದೊಂದಿಗೆ ಕೈಜೋಡಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.

ಮಕ್ಕಳು ಆರೋಗ್ಯವಂತರಾಗಿ, ದೈಹಿಕವಾಗಿ ಸದೃಢರಾಗಿ ಬೆಳೆಯುವುದರೊಂದಿಗೆ ದೇಶದ ಉತ್ತಮ ಪ್ರಜೆಗಳಾಗಲು ಅಗತ್ಯವಾದ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ILO), ನವದೆಹಲಿ ನಿರ್ದೇಶಕರಾದ ಶ್ರೀಮತಿ ಮಿಚಿಕೋ ಮಿಯಾಮೊಟೋ, ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಕೆ. ಫಾಹಿಮ್, ಕಾರ್ಮಿಕ ಇಲಾಖೆ ಆಯುಕ್ತರಾದ ಡಾ. ಹೆಚ್.ಎನ್. ಗೋಪಾಲ ಕೃಷ್ಣ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಆರ್., ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್., ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

m

Related Posts