Featured, ಇತರೆ, ಸ್ಥಳೀಯ

ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಕೆಎಸ್‌ಆರ್‌ಟಿಸಿ ಆದೇಶ ಜಾರಿ

ಬೆಂಗಳೂರು, ಜೂನ್ 12: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ನಿರ್ಧಾರದಂತೆ ರಾಜ್ಯದ ಎಲ್ಲಾ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 829/2026 ಅನ್ನು ಹೊರಡಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯೂಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಅನುಮೋದನೆ ನೀಡಿದ್ದು, ಅದರ ಅನುಷ್ಠಾನಕ್ಕಾಗಿ ಈ ಆದೇಶ ಹೊರಡಿಸಲಾಗಿದೆ.

ಆದೇಶದ ಪ್ರಕಾರ, ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಜಾರಿಯಲ್ಲಿರುವ ಅರ್ಹತಾ ಮಾನದಂಡಗಳು, ದೂರದ ಮಿತಿ, ಪಾಸ್ ಅವಧಿ ಸೇರಿದಂತೆ ಇತರೆ ನಿಯಮಗಳು ಮುಂದುವರಿಯಲಿವೆ. ವಿದ್ಯಾರ್ಥಿಗಳು ಹಿಂದಿನಂತೆಯೇ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು.
ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ನೆರೆ ರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಈ ಉಚಿತ ಬಸ್ ಪಾಸ್ ಸೌಲಭ್ಯ ಅನ್ವಯವಾಗಲಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ ಶುಲ್ಕ ಪಾವತಿಸಿ ಪಡೆದಿರುವ ವಿದ್ಯಾರ್ಥಿ ಬಸ್ ಪಾಸ್‌ಗಳು ಯಥಾಸ್ಥಿತಿಯಲ್ಲಿ ಮಾನ್ಯವಾಗಿರಲಿದ್ದು, ವಿದ್ಯಾರ್ಥಿಗಳು ಪಾವತಿಸಿರುವ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮರುಪಾವತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು.
ಪಾಸ್ ಕಳೆದುಹೋಗುವುದು, ಮರುಮುದ್ರಣ ಅಗತ್ಯವಾಗುವುದು, ವಿದ್ಯಾರ್ಥಿಯ ಹೆಸರು ಅಥವಾ ವಿಳಾಸ ಬದಲಾವಣೆ, ಪಾಸ್ ಹಾಳಾಗುವುದು ಇತ್ಯಾದಿ ಸಂದರ್ಭಗಳಲ್ಲಿ ರೂ.100 ಸಂಸ್ಕರಣಾ ಶುಲ್ಕ ಮಾತ್ರ ವಿಧಿಸಲಾಗುತ್ತದೆ.
m

Related Posts