ಇತರೆ

ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ಶಿಕ್ಷಣ ಸಂಸ್ಥೆಯ ಪರವಾಗಿ ಸಂಚಾಲಕ ಕೆ.ಎಂ. ಮುಸ್ತಫ ಹಾಗೂ ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಣ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಂಗಳೂರು, ಜೂನ್ 13: ಮೀಫ್ (ಮುಸ್ಲಿಂ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ ಫೆಡರೇಷನ್) ಶೈಕ್ಷಣಿಕ ಒಕ್ಕೂಟದ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿನ ಸಾಧನೆಗೈದ ಶಿಕ್ಷಣ ಸಂಸ್ಥೆಗಳಿಗೆ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ಸೀಟುಗಳ ಮಂಜೂರಾತಿ ಆದೇಶ ಹಾಗೂ ಝಕಾತ್ ಫಂಡ್ ಸಹಾಯಧನ ವಿತರಣೆ ಕಾರ್ಯಕ್ರಮವು ಮಂಗಳೂರಿನ ಇಂಡಿಯಾನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ, ಅತ್ಯಧಿಕ ವಿಶಿಷ್ಟ ಶ್ರೇಣಿಗಳನ್ನು ಗಳಿಸಿದ ಹಾಗೂ 600ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆಗಳಿಗೆ ವಿಶೇಷ ಪುರಸ್ಕಾರ ನೀಡಲಾಯಿತು.
ಈ ಸಂದರ್ಭದಲ್ಲಿ ಸುಳ್ಯದ ಗ್ರೀನ್ ವ್ಯೂ ಪ್ರೌಢಶಾಲೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಮಾಡಲಾಯಿತು. ಪ್ರಸಕ್ತ ಸಾಲಿನಲ್ಲಿ ಶಾಲೆಯ ಮೂವರು ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕಗಳನ್ನು ಪಡೆದಿದ್ದು, ಎಲ್ಲಾ ವಿದ್ಯಾರ್ಥಿಗಳೂ ಡಿಸ್ಟಿಂಕ್ಷನ್ ಹಾಗೂ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಇದುವರೆಗೆ ಶಾಲೆಯ 19 ಬ್ಯಾಚ್‌ಗಳ ಪೈಕಿ 17 ಬ್ಯಾಚ್‌ಗಳು ಶೇ.100 ಫಲಿತಾಂಶ ದಾಖಲಿಸಿರುವುದು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಮಾಜಿ ಎಂಎಲ್‌ಸಿ ಹಾಗೂ ಮೈಸೂರು ಫಾರೂಕ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಬಿ.ಎಂ. ಫಾರೂಕ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಮೀಫ್ ಗೌರವಾಧ್ಯಕ್ಷ ಉಮ್ಮರ್ ಟೀಕೆ, ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ಶಶಿಧರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.
m

Related Posts