ಜಾಲ್ಸೂರು ಅಡ್ಕಾರ್‌ನ ಹಯಾತುಲ್ ಇಸ್ಲಾಂ ಮದ್ರಸ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನಿ ಬಾಲ ಸಂಘ (SBS) ಇದರ ನೂತನ ಸಮಿತಿ ರಚನಾ ಸಭೆಯು ಮದ್ರಸ ಮುಖ್ಯೋಪಾಧ್ಯಾಯರಾದ ಮಹಮ್ಮದ್ ಅಶ್ರಫೀ ಉಸ್ತಾದ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಮಹಮ್ಮದ್ ಅಶ್ರಫೀ ರವರು ವಿದ್ಯಾರ್ಥಿಗಳಿಗೆ ಸುನ್ನಿ ಬಾಲ ಸಂಘದ ಉದ್ದೇಶ, ಧಾರ್ಮಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ, ನೈತಿಕ ಮೌಲ್ಯಗಳು ಹಾಗೂ ಸಂಘಟನಾ ಕೌಶಲ್ಯಗಳನ್ನು ಬೆಳೆಸುವಲ್ಲಿ SBS ವಹಿಸುತ್ತಿರುವ ಮಹತ್ವದ ಪಾತ್ರದ ಕುರಿತು ಉಸ್ತಾದರುಗಳು ವಿವರಿಸಿದರು. ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಹಾಗೂ ಸಮಾಜಮುಖಿ ಚಟುವಟಿಕೆಗಳತ್ತ ಆಸಕ್ತಿ ಮೂಡಿಸುವಲ್ಲಿ ಸುನ್ನಿ ಬಾಲ ಸಂಘ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ 2026-27ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಫಹಿಂ, ಪ್ರಧಾನ ಕಾರ್ಯದರ್ಶಿಯಾಗಿ ಜೈಶ್ ಆರ್., ಕೋಶಾಧಿಕಾರಿಯಾಗಿ ಶಾಝಿಲ್, ಉಪಾಧ್ಯಕ್ಷರಾಗಿ ರಿಫಾಯ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಹಸನ್ ಅವರನ್ನು ಆಯ್ಕೆ ಮಾಡಲಾಯಿತು.
ಅದೇ ರೀತಿ ಸಾಹಿತ್ಯ ಸಮಾಜದ ಮುದಬ್ಬಿರ್ ಆಗಿ ಶಾಹಿದ್ ಫಾಳಿಲಿ ಆಲ್ ಹಿಕಮಿ ಅವರನ್ನು ನೇಮಿಸಲಾಯಿತು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಉಸ್ತಾದರುಗಳು ಅಭಿನಂದನೆ ಸಲ್ಲಿಸಿ, ಸಂಘದ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಂತೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮದ್ರಸದ ಉಸ್ತಾದರುಗಳು ವಿದ್ಯಾರ್ಥಿಗಳಿಗೆ ಹಿತವಚನ ನೀಡಿ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೇರೇಪಿಸಿದರು. ನೂತನ ಪ್ರಧಾನ ಕಾರ್ಯದರ್ಶಿಯವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಮಾಪ್ತಿಗೊಂಡಿತು.





m
