Featured, ಇತರೆ, ಸ್ಥಳೀಯ

ವಿದ್ಯಾರ್ಥಿ ಬಸ್ ಪಾಸ್ ಶುಲ್ಕ ಮರುಪಾವತಿ: ಅರ್ಜಿ ಸಲ್ಲಿಸಲು ಕೆಎಸ್‌ಆರ್‌ಟಿಸಿ ಸೂಚನೆ

ಬೆಂಗಳೂರು, ಜೂನ್ 25: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಬಸ್ ಪಾಸ್‌ಗಳಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆ ಹೊರಡಿಸಿದೆ. ರಾಜ್ಯ ಸರ್ಕಾರವು ನಾಲ್ಕು ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಪ್ರಯಾಣಿಸುವ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಪಾವತಿಸಿದ ಮೊತ್ತವನ್ನು ಮರುಪಾವತಿಸಲಾಗುವುದು ಎಂದು ತಿಳಿಸಿದೆ.

ಸರ್ಕಾರದ ಆದೇಶದಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ದೊರೆಯಲಿದೆ.

ಮರುಪಾವತಿ ಪಡೆಯುವ ವಿಧಾನ

  1. 2026-27ನೇ ಸಾಲಿನಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಮೊಬೈಲ್ ಸಂಖ್ಯೆ ಹಾಗೂ OTP ಮೂಲಕ ಲಾಗಿನ್ ಆಗಿ ಮರುಪಾವತಿಗಾಗಿ ಅರ್ಜಿ ಸಲ್ಲಿಸಬೇಕು.
  2. ವಿದ್ಯಾರ್ಥಿಗಳು ಆಧಾರ್ ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
  3. ವಿದ್ಯಾರ್ಥಿಗಳು ತಮ್ಮ ಅಥವಾ ಪೋಷಕರ ಬ್ಯಾಂಕ್ ಖಾತೆ ವಿವರಗಳನ್ನು ನಮೂದಿಸಿ ಅರ್ಜಿ ಸಲ್ಲಿಸಬೇಕು.
  4. ಅರ್ಜಿ ಸಲ್ಲಿಸಿದ ಬಳಿಕ 7 ದಿನಗಳ ಒಳಗೆ ಪಾಸ್ ಶುಲ್ಕದ ಮೊತ್ತವನ್ನು NEFT/RTGS ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
  5. ಮರುಪಾವತಿ ಯಶಸ್ವಿಯಾಗಿ ಜಮಾ ಆದ ನಂತರ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ಕಳುಹಿಸಲಾಗುತ್ತದೆ.
ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿರುವಂತೆ, ಮರುಪಾವತಿ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಜಮಾ ಮಾಡಲಾಗುವುದರಿಂದ ವಿದ್ಯಾರ್ಥಿಗಳು ಯಾವುದೇ ಬಸ್ ಪಾಸ್ ಕೌಂಟರ್‌ಗೆ ಭೇಟಿ ನೀಡುವ ಅಗತ್ಯವಿಲ್ಲ. ಎಂದು ತಿಳಿಸಿದೆ
m

 

Related Posts