Featured, ಇತರೆ, ಸ್ಥಳೀಯ

ನಿರಂತರ ಮಳೆ ಅಬ್ಬರ: ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಜು. 2: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಹಾಗೂ ಹವಾಮಾನ ಇಲಾಖೆ ನೀಡಿರುವ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಪರಿಗಣಿಸಿ, ಜುಲೈ 3ರಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶದಲ್ಲಿ ತಿಳಿಸಿದ್ದಾರೆ.

ಈ ರಜೆ ಆದೇಶವು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ 12ನೇ ತರಗತಿಯವರೆಗೆ ಇರುವ ವಸತಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

m

Related Posts