ಸಂಪಾಜೆ ಗ್ರಾಮದ ಕಲ್ಲುಗುಂಡಿಯ ನಿವಾಸಿಗಳಾದ ಶ್ರೀ ಹಸೈನಾರ್ ಹಾಗೂ ಶ್ರೀಮತಿ ಲೈಲಾ ದಂಪತಿಯ ಪುತ್ರರಾಗಿರುವ ಡಾ. ಮೊಹಮ್ಮದ್ ಅಮೀರ್ ಕೆ.ಎಚ್ ಅವರು ಫಿಸಿಯೋಥೆರಪಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಪದವಿ ಪಡೆದರು.
ಸಂಸ್ಥೆಯ ಹಿರಿಯ ಅಧಿಕಾರಿಗಳು, ಅಧ್ಯಾಪಕರು ಹಾಗೂ ಗಣ್ಯರ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಅವರಿಗೆ ಪದವಿ ಪ್ರದಾನ ಮಾಡಲಾಯಿತು.
ಡಾ. ಮೊಹಮ್ಮದ್ ಅಮೀರ್ ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.




m
